FSSAI’ಯಿಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಫುಡ್ ಎನಾಲಿಸ್ಟ್ (ಆಹಾರ ವಿಶ್ಲೇಷಕರ) ನೇಮಕಾತಿ (11ನೇ FAE-2025) ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಹ ಆಸಕ್ತ ಅಭ್ಯರ್ಥಿಗಳು ಜನವರಿ 22, 2026ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಎಫ್‌ಎಸ್‌ಎಸ್‌ಎಐನ ಅಧಿಕೃತ ವೆಬ್‌ಸೈಟ್ https://fssai.gov.in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು ಎಂದು ತಿಳಿಯೋಣ.
ಯಾರು ಅರ್ಜಿ ಸಲ್ಲಿಸಬಹುದು?
ಫುಡ್ ಎನಾಲಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಮೆಸ್ಟ್ರಿ, ಡೈರಿ ಕೆಮೆಸ್ಟ್ರಿ, ಮೈಕ್ರೋಬಯಾಲಾಜಿ, ಫುಡ್ ಸೇಫ್ಟೀ, ಎಗ್ರಿಕಲ್ಚರ್ ಸೈನ್ಸ್ ಸೇರಿದಂತೆ 14 ವಿಷಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಪಿಎಚ್‌ಡಿ ಪದವಿ ಹೊಂದಿರಬೇಕು. ಇನ್‌ಸ್ಟಿಟ್ಯೂಟ್ ಆಫ್ ಕೆಮೆಸ್ಟ್ರಿ (ಇಂಡಿಯಾ) ದಿಂದ ಫುಡ್ ಎನಾಲಿಸ್ಟ್ ವಿಭಾಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಸಹ ಮಾನ್ಯವಾಗಿರುತ್ತದೆ. ಆಹಾರ ವಿಶ್ಲೇಷಣಾ ಕ್ಷೇತ್ರದಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವದ ಅಗತ್ಯವಿದೆ.
ನೇಮಕಾತಿ ಅಧಿಸೂಚನೆಯ ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ.
ಅರ್ಜಿ ಶುಲ್ಕ
ಅರ್ಜಿ ನಮೂನೆಯನ್ನು ಭರ್ತಿ ಮಾಡುವುದರ ಜೊತೆಗೆ, ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ₹2,500 ಮತ್ತು ಪ್ರಾಯೋಗಿಕ ಪರೀಕ್ಷೆಗೆ ₹5,000 ಠೇವಣಿ ಇಡಬೇಕಾಗುತ್ತದೆ. ಅರ್ಜಿಯನ್ನು ಸಲ್ಲಿಸಿದ ನಂತರ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ ಹಾಗೂ ಅರ್ಜಿಯಲ್ಲಿ ದೋಷಗಳು ಕಂಡುಬಂದರೆ ಅರ್ಜಿಯನ್ನು ತಿರಸ್ಕರಿಲಾಗುತ್ತದೆ ಎಂಬುದನ್ನು ನೆನಪಿಡಿ. ಆದ್ದರಿಂದ, ಅಭ್ಯರ್ಥಿಗಳು ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು. ಈ ಪರೀಕ್ಷೆಗೆ ಯಾವುದೇ ಮೀಸಲಾತಿಗಳು ಅನ್ವಯಿಸುವುದಿಲ್ಲ.
ಐಟಿಐ ಲಿಮಿಟೆಡ್ ನೇಮಕಾತಿ 215 ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ?
FSSAI ಆಹಾರ ವಿಶ್ಲೇಷಕರ ಅರ್ಜಿ ನಮೂನೆಯನ್ನು ಭರ್ತಿ ಮಾಡಲು, ಮೊದಲಿಗೆ ಅಭ್ಯರ್ಥಿಗಳು FSSAI ಅಧಿಕೃತನ ವೆಬ್‌ಸೈಟ್‌ಗೆ ಭೇಟಿ ನೀಡಿ.
ವೆಬ್‌ಸೈಟ್‌ನ ಮುಖಪುಟದಲ್ಲಿರುವ ನೇಮಕಾತಿ ಸಂಬಂಧಿತ ಲಿಂಕ್ ಅನ್ನು ಕ್ಲಿಕ್ ಮಾಡಿ.
ಮೊದಲು ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ, ಅಗತ್ಯವಿರುವ ವಿವರಗಳನ್ನು ನಮೂದಿಸಿ ನಿಮ್ಮ ಹೆಸರನ್ನು ನೋಂದಾಯಿಸಿ.
ಇದಾದ ನಂತರ, ಲಾಗಿನ್ ಮೂಲಕ ಇತರ ವಿವರಗಳನ್ನು ಭರ್ತಿ ಮಾಡುವ ಮೂಲಕ ಫಾರ್ಮ್ ಅನ್ನು ಪೂರ್ಣಗೊಳಿಸಿ.
ಅಂತಿಮವಾಗಿ, ನಿಗದಿತ ಶುಲ್ಕವನ್ನು ಪಾವತಿಸಿ, ಮತ್ತೊಮ್ಮೆ ಫಾರ್ಮ್ ಅನ್ ಪರಿಶೀಲಿಸಿ ಕೊನೆಯಲ್ಲಿ ಸಲ್ಲಿಸಿ.

