HOME GUARD, ಗೃಹರಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಗೃಹರಕ್ಷಕರ ಸ್ವಯಂಸೇವಕ ಸ್ಥಾನಗಳನ್ನು ಭರ್ತಿ ಮಾಡಲು ಸಂಡೂರು, ಸಿರುಗುಪ್ಪ, ಕುರುಗೋಡು, ಕುಡುತಿನಿ, ತೆಕ್ಕಲಕೋಟೆ, ಮತ್ತು ತೋರಣಗಲ್ಲು ಘಟಕಗಳಲ್ಲಿ ಖಾಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆಯು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 19 ವರ್ಷಗಳು ತುಂಬಿರಬೇಕು ಹಾಗೂ 40 ವರ್ಷಗಳು ಮೀರಿರಬಾರದು. ಸಂಡೂರು, ಕುಡುತಿನಿ, ತೆಕ್ಕಲಕೋಟೆ, ತೋರಣಗಲ್ಲು, ಕುರುಗೋಡು ಮತ್ತು ಸಿರುಗುಪ್ಪ ಘಟಕಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಘಟಕದ 10 ಕಿ.ಮೀ. ವ್ಯಾಪ್ತಿಯೊಳಗೆ ವಾಸವಾಗಿರಬೇಕು. ಈ ಬಗ್ಗೆ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯಲ್ಲಿ ಸ್ಥಳೀಯ ವಿಳಾಸದ ಮಾಹಿತಿ ಹೊಂದಿರಬೇಕು.

ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ವರ್ಗಾವಣೆ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿಯನ್ನು ಲಗತ್ತಿಸುವುದು. ಆಯ್ಕೆ ವಿಧಾನ ದೈಹಿಕ ಸಾಮರ್ಥ್ಯ, ಮೌಖಿಕ ಸಂದರ್ಶನ ಕೈಗೊಳ್ಳಲಾಗುತ್ತದೆ. ಪುರುಷ ಅಭ್ಯರ್ಥಿಯ ಎತ್ತರ 168 ಸೆ.ಮೀ ಮತ್ತು ತೂಕ ಕನಿಷ್ಠ 50 ಕೆ.ಜಿ ಹೊಂದಿರಬೇಕು. ಅಭ್ಯರ್ಥಿಯು ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು. ಅಭ್ಯರ್ಥಿಯು ಯಾವುದೇ ರಾಜಕೀಯ ಪಕ್ಷಗಳಲ್ಲಿ ತೊಡಗಿರಬಾರದು.

ಗೃಹರಕ್ಷಕರ ಹುದ್ದೆಯು ಸ್ವಯಂ ಸೇವಕ ಹುದ್ದೆಯಾಗಿದ್ದು, ಯಾವುದೇ ಸಂಬಳವಿರುವುದಿಲ್ಲ. ಭರ್ತಿಯಾದ ಗೃಹರಕ್ಷಕನು ಸ್ವಯಂ ಸೇವಕ ಗೃಹರಕ್ಷಕನಾಗಿರುತ್ತಾನೆಯೇ ಹೊರತು ಸರ್ಕಾರಿ ನೌಕರ ಅಥವಾ ಸಿಬ್ಬಂದಿಯಾಗಿರುವುದಿಲ್ಲ. ವಿಶೇಷ ಕೌಶ್ಯಲತೆ ಹೊಂದಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು (ಡ್ರೈವಿಂಗ್, ಎಲೆಕ್ಟಿçಷಿಯನ್, ಕಂಪ್ಯೂಟರ್ ಆಪರೇಟರ್, ಪೇಂಟರ್ ಮತ್ತು ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ಮತ್ತು ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪ್ರಾಥಮಿಕ ಆದ್ಯತೆ ನೀಡಲಾಗುವುದು).

ಸಂಡೂರು, ಕುಡುತಿನಿ, ತೆಕ್ಕಲಕೋಟೆ, ತೋರಣಗಲ್ಲು, ಕುರುಗೋಡು ಮತ್ತು ಸಿರುಗುಪ್ಪ ಘಟಕಗಳಲ್ಲಿ ಸೇರಬಯಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮoದಿರದ ಗೃಹರಕ್ಷಕ ದಳದ ಕಚೇರಿಯಲ್ಲಿ ನೀಡಲಾಗುವುದು.

ಸೂಚನೆ: ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರತೋಷಕ ನೀಡುವುದು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ, ಈ ದಿಶೆಯಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ ಮಾರು ಹೋಗಬಾರದೆಂದು ಈ ಮೂಲಕ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.7975872247 ಮತ್ತು ದೂ.08392-276421 ಗೆ ಸಂಪರ್ಕಿಸಬಹುದು ಎಂದು ಗೃಹರಕ್ಷಕರ ಆಯ್ಕೆ ಸಮಿತಿಯ ಸಮಾದೇಷ್ಟರು ಹಾಗೂ ಸದಸ್ಯ-ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಗಳನ್ನು ಏ.17 ರಿಂದ 29 ರ ವರೆಗೆ ಬೆಳಿಗ್ಗೆ 09 ಗಂಟೆಯಿAದ 12 ಗಂಟೆಯವರೆಗೆ ಮಾತ್ರ ನೀಡಲಾಗುವುದು (ರಜಾ ದಿನಗಳನ್ನು ಹೊರತು ಪಡಿಸಿ).

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

2 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

3 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

3 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

4 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

4 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

5 hours ago