ISRO ಇಸ್ರೋದಿಂದ 320 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಕೇಂದ್ರೀಕೃತ ನೇಮಕಾತಿ ಮಂಡಳಿ (ಇಸ್ರೋ-ಐಸಿಆರ್‌ಬಿ) ವಿಜ್ಞಾನಿ / ಎಂಜಿನಿಯರ್ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇಸ್ರೋದ ಅಧಿಕೃತ ವೆಬ್‌ಸೈಟ್ isro.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಪ್ರಕ್ರಿಯೆ ಮೂಲಕ ಸಂಸ್ಥೆಯಲ್ಲಿ 320 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು 2025ರ ಜೂನ್ 16 ಕೊನೆಯ ದಿನ. ಅರ್ಹತಾ ಮಾನದಂಡ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳು ಇಲ್ಲಿವೆ.

ಖಾಲಿ ಹುದ್ದೆಗಳ ವಿವರ ಯೋಗೆತೆ. ಜಾತಿ ಮತ್ತು ಹುದ್ದೆ ಹೇಸುರು..

1. ಸೈಂಟಿಸ್ಟ್/ಎಂಜಿನಿಯರ್ ‘ಎಸ್‌ಸಿ’ (ಎಲೆಕ್ಟ್ರಾನಿಕ್ಸ್): 113 ಹುದ್ದೆಗಳು

2. ಸೈಂಟಿಸ್ಟ್/ಎಂಜಿನಿಯರ್ ‘ಎಸ್‌ಸಿ’ (ಮೆಕ್ಯಾನಿಕಲ್): 160 ಹುದ್ದೆಗಳು

3. ಸೈಂಟಿಸ್ಟ್/ಎಂಜಿನಿಯರ್ ‘ಎಸ್‌ಸಿ’ (ಕಂಪ್ಯೂಟರ್ ಸೈನ್ಸ್): 44 ಹುದ್ದೆಗಳು

4. ಸೈಂಟಿಸ್ಟ್/ಎಂಜಿನಿಯರ್ ‘ಎಸ್‌ಸಿ’ (ಎಲೆಕ್ಟ್ರಾನಿಕ್ಸ್)- ಪಿಆರ್‌ಎಲ್: 2 ಹುದ್ದೆಗಳು

5. ಸೈಂಟಿಸ್ಟ್/ಎಂಜಿನಿಯರ್ ‘ಎಸ್‌ಸಿ’ (ಕಂಪ್ಯೂಟರ್ ಸೈನ್ಸ್) -ಪಿಆರ್‌ಎಲ್: 1 ಹುದ್ದೆ

ಅರ್ಹತಾ ಮಾನದಂಡಗಳು

ವಿಶ್ವವಿದ್ಯಾಲಯವು ಸೂಚಿಸಿದ ಕೋರ್ಸ್‌ನ ನಿಗದಿತ ಅವಧಿಯೊಳಗೆ ಪದವಿ ಪೂರ್ಣಗೊಳಿಸಿರಬೇಕು. ಅಂತಿಮ ಪದವಿ 31.08.2025ರೊಳಗೆ ಮುಗಿಯುವಂತಿದ್ದರೆ, 2024-25ರ ಶೈಕ್ಷಣಿಕ ವರ್ಷದಲ್ಲಿ ಮೇಲಿನ ಕೋರ್ಸ್ ಅನ್ನು ಪೂರ್ಣಗೊಳಿಸಲಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಗಳು ಒಟ್ಟು 65 ಶೇ. ಅಂಕಗಳನ್ನು ಪಡೆಯಬೇಕು. ಎಲ್ಲಾ ಸೆಮಿಸ್ಟರ್‌ಗಳ ಸರಾಸರಿಸಿಜಿಪಿಎ 10ರಲ್ಲಿ 6.84 ಫಲಿತಾಂಶ ಇರಬೇಕು.

ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯು ಎರಡು ಭಾಗಗಳನ್ನು ಒಳಗೊಂಡಿರುವ ಒಂದೇ ವಸ್ತುನಿಷ್ಠ ಮಾದರಿಯ ಪತ್ರಿಕೆಯನ್ನು ಹೊಂದಿರುತ್ತದೆ.

ಪರೀಕ್ಷೆ ವಿವರ:

ಪರೀಕ್ಷೆಯ ಅವಧಿ 120 ನಿಮಿಷಗಳು. ಲಿಖಿತ ಪರೀಕ್ಷೆಯಲ್ಲಿನ ಕಾರ್ಯಕ್ಷಮತೆಯ ಆಧಾರದ ಮೇಲೆ, ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.

ಅರ್ಜಿ ಶುಲ್ಕ ವಿವರ

ಎಲ್ಲಾ ಹುದ್ದೆಗಳಿಗೆ ಅರ್ಜಿ ಶುಲ್ಕ 250 ರೂ. ನಿಗದಿಪಡಿಸಲಾಗಿದೆ. ಆದರೆ, ಆರಂಭದಲ್ಲಿ ಎಲ್ಲಾ ಅಭ್ಯರ್ಥಿಗಳು ಪ್ರತಿ ಅರ್ಜಿಗೆ 750 ರೂ.ಗಳನ್ನು ಸಂಸ್ಕರಣಾ ಶುಲ್ಕವಾಗಿ ಏಕರೂಪವಾಗಿ ಪಾವತಿಸಬೇಕಾಗುತ್ತದೆ.

ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮಾತ್ರ ಸಂಸ್ಕರಣಾ ಶುಲ್ಕ ಮರುಪಾವತಿಸಲಾಗುತ್ತದೆ. ಮಹಿಳೆಯರು, ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ, ಮಾಜಿ ಸೈನಿಕರಿಗೆ ಪೂರ್ಣ ಮರುಪಾವತಿ ಇರಲಿದೆ.

ಅಂದರೆ 750 ರೂ ಮರುಪಾವತಿ. ಇತರ ಎಲ್ಲಾ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅರ್ಜಿ ಶುಲ್ಕವನ್ನು ಕಡಿತಗೊಳಿಸಿದ ನಂತರ 500 ರೂ ಮರುಪಾವತಿಸಲಾಗುತ್ತದೆ.

Website link

http://isro.gov.in

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

5 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

6 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

6 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

8 hours ago