K-SET ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಎಲ್ಲಾ ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿ ತಯಾರ್!

17 ಡಿಸೆಂಬರ್ 24.ಬೆಂಗಳೂರು:- ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಸಂಬಂಧಿಸಿದಂತೆ 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿ ಪ್ರಾಧಿಕಾರ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆಗಳು  objection ಇದ್ದಲ್ಲಿ ಡಿ.19ರ ಮಧ್ಯಾಹ್ನ 12.30 pm ರೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ಬೇಕಾಗಿದೆಮಾಹಿತಿ www.prajaprabhat.com ಗೆ ಮಾಹಿತಿ ಲಭ್ಯವಾಗಿದೆ.

ದಿನಾಂಕ 24.11.2024 ರಂದು ಪ್ರಾಧಿಕಾರದಿಂದ ನಡೆಸಿದ ಕೆಸೆಟ್-2024 ಪರೀಕ್ಷೆಗೆ ಸಂಬಂಧಿಸಿದಂತೆ, ಒಟ್ಟು 41 ವಿಷಯಗಳ ಕೀ ಉತ್ತರಗಳನ್ನು ಪ್ರಕಟಿಸಿ ದಿನಾಂಕ 29.11.2024 ರವರೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

http://www.prajaprabhat.com

ಪ್ರಕಟಿತ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ 13.12.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಂತಿಮ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ: 19.12.2024 ಮಧ್ಯಾಹ್ನ 12.30 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಪೂರಕ ದಾಖಲೆಗಳಿಲ್ಲದೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಕೆ-ಸೆಟ್‌ ಪರೀಕ್ಷೆಗೆ ಶೇ. 84ರಷ್ಟು ಅಭ್ಯರ್ಥಿಗಳು ಹಾಜರು

ಕೆ-ಸೆಟ್‌ ಪರೀಕ್ಷೆಗೆ ಶೇ. 84ರಷ್ಟು ಹಾಗೂ ರಾಯಚೂರು ವಿವಿ ಪರೀಕ್ಷೆಗೆ ಶೇ. 64 ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್‌, ದಾವಣಗೆರೆ, ಧಾರವಾಡ, ಕಲಬುರರ್ಗಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ ಹಾಗೂ ವಿಜಯಪುರ ಜಿಲ್ಲೆಗಳ ಒಟ್ಟು 252 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ರಾಯಚೂರು ವಿವಿ ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಿತು. ಈ ಪರೀಕ್ಷೆಯನ್ನು ವೆಬ್‌ಕಾಸ್ಟಿಂಗ್‌ ಮೂಲಕ ಕೆಇಎಯಲ್ಲಿ ಸ್ಥಾಪಿಸಿದ್ದ ಕಮಾಂಡ್‌ ಸೆಂಟರ್‌ನಲ್ಲಿ ನಿಗಾವಹಿಸಲಾಯಿತು. ಯಾವುದೇ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಎಚ್ಚರವಹಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.


ದೂರವಾಣಿ: 080-23 564 583
ಸಹಾಯವಾಣಿ: 080-23 460 460.
ಇ-ಮೇಲ್: keauthority-ka@nic.in
ವೆಬ್‌ಸೈಟ್: https://kea.kar.nic.in

https://cetonline.karnataka.gov.in/vaoresult/ksetcompresult.aspx

prajaprabhat

View Comments

  • Kea anounce wrong key answers in revised key answers also and I requested for proper selection of cc andidates give more important for physically handicapped asper central government reservation please follow that rules properly

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

5 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

5 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

6 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

6 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

6 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

7 hours ago