Home » ಲೈವ್ ನ್ಯೂಸ್ » KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ

KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ

Facebook
X
WhatsApp
Telegram

ಬೆಂಗಳೂರು.19.ಮಾರ್ಚ.26: ರಾಜ್ಯ ಸರ್ಕಾರ ಇನ್ಮುಂದೆ ರಾಜ್ಯದಲ್ಲಿ ಖಾಲಿಯಿರುವ ಸರ್ಕಾರಿ ಗ್ರೂಪ್ A.B ಹುದ್ದೆಗಳು ಪ್ರತಿ ವರ್ಷ ನೇಮಕಾತಿ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಯುವಕ-ಯುವತಿಯರಿಗೆ ಸಿಹಿಸುದ್ದಿ ನೀಡಿದೆ.

ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕವೂ ಪ್ರತಿ ವರ್ಷ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ (ಗ್ರೂಪ್ ಎ ಮತ್ತು ಬಿ) ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

ಕೆಪಿಎಸ್‌ಸಿಯಲ್ಲಿ ಮಹತ್ತರ ಸುಧಾರಣೆ

ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ ಅಕ್ರಮಗಳ ಆರೋಪಗಳು ಹಾಗೂ ಇದರಿಂದ ಉಂಟಾಗುತ್ತಿರುವ ನ್ಯಾಯಾಂಗ ವ್ಯಾಜ್ಯಗಳಿಗೆ ಶಾಶ್ವತ ಮುಕ್ತಿ ನೀಡಲು ಸರ್ಕಾರ ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅನುಸರಿಸುತ್ತಿರುವ ಪಾರದರ್ಶಕ ಹಾಗೂ ಅತ್ಯುತ್ತಮ ಕ್ರಮಗಳನ್ನು ಕೆಪಿಎಸ್‌ಸಿಯಲ್ಲೂ ಅಳವಡಿಸಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಇಲಾಖೆಯಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ.

ಸಾಮಾನ್ಯವಾಗಿ ಕೆಪಿಎಸ್‌ಸಿ ನೇಮಕಾತಿ ಅಧಿಸೂಚನೆಗಳು ನಾಲ್ಕು ವರ್ಷಗಳಿಗೊಮ್ಮೆ ಮಾತ್ರ ಪ್ರಕಟವಾಗುತ್ತಿದ್ದವು. ಇದರಿಂದಾಗಿ ನಿರಂತರವಾಗಿ ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿರುವ ಯುವ ಅಭ್ಯರ್ಥಿಗಳಿಗೆ ವಯೋಮಿತಿ ಮೀರಿ ಅನ್ಯಾಯವಾಗುತ್ತಿತ್ತು.

ಪರಿಣಾಮ, ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲೇರುತ್ತಿದ್ದರಿಂದ ಆಯೋಗವು ಸಾಲು ಸಾಲು ವ್ಯಾಜ್ಯಗಳನ್ನು ಎದುರಿಸುವಂತಾಗಿತ್ತು. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು, ಯುಪಿಎಸ್‌ಸಿ ಮಾದರಿಯಲ್ಲಿ ನಿರ್ದಿಷ್ಟ ದಿನಾಂಕಗಳೊಂದಿಗೆ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯನ್ನು ನಿಗದಿಪಡಿಸಲು ತೀರ್ಮಾನಿಸಲಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology