ಬೆಂಗಳೂರು.09.ಜುಲೈ.25:- ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮತ್ತು ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಆಕರ್ಷಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. 4-5 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಮಕ್ಕಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲು ಯೋಜಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ 285 ಕೆಪಿಎಸ್ ಶಾಲೆಗಳಿದ್ದು, ಮುಂದಿನ ದಿನಗಳಲ್ಲಿ 500 ಕ್ಕೂ ಹೆಚ್ಚು ಶಾಲೆಗಳನ್ನು ಆರಂಭಿಸುವ ಉದ್ದೇಶವನ್ನು ರಾಜ್ಯ ಸರಕಾರ ಹೊಂದಿದೆ ಎಂದು ತಿಳಿಸಿದೆ.
ಕೆಪಿಎಸ್ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾರಿಗೆ ವೆಚ್ಚದ ಹೊರೆಯನ್ನು ಕಡಿಮೆ ಮಾಡಿ, ಸುಲಭವಾಗಿ ಶಾಲೆಗೆ ತಲುಪಲು ಸಹಾಯ ಮಾಡುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ್ದಾಗಿದೆ.
ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಎಲ್‌ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.
ಆರಂಭದಲ್ಲಿ ಈ ಬಸ್ ವ್ಯವಸ್ಥೆಯ ಅವಶ್ಯಕತೆ ಹೆಚ್ಚಿದೆಯೋ ಅಂತಹ ಪ್ರದೇಶಗಳಲ್ಲಿ ಉಚಿತ ಬಸ್ ವ್ಯವಸ್ಥೆಯನ್ನು ಆರಂಭಿಸಲಾಗುವುದು ಎಂದು ತಿಳಿಸಲಾಗಿದೆ.