KSRLPS  ನಿಂದ ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಸೇರಿದಂತೆ ನಾನಾ ಹುದ್ದೆಗಳಿಗೆ ನೇಮಕಾತಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು.24.ಮೇ.25:- ರಾಜ್ಯದಂತ  ಕಾರ್ಯ ನಿರ್ವಹಿಸಿರುವ (KSRLPS) ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಸೇರಿದಂತೆ ನಾನಾ ಹುದ್ದೆಗಳಿಗೆ ಅರ್ಜೆ ಆಹ್ವಾನ.

ಈ ಹುದ್ದೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 30 ಆಗಿದೆ.ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಹುದ್ದೆ ವಿವರ:

ಒಟ್ಟು 14 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದ್ದು, ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್- ಸ್ಕಿಲ್, ಕ್ಲಸ್ಟರ್ ಸೂಪರ್ವೈಸರ್, ತಾಲೂಕ್ ಪ್ರೋಗ್ರಾಂ ಮ್ಯಾನೇಜರ್ – ಎಸ್ವಿಇಪಿ, ಆಫೀಸ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಿದೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ತಕ್ಕಂತೆ ಎಂಬಿಎ, ಎಂಎಸ್ಡಬ್ಲ್ಯೂ, ಸ್ನಾತಕೋತ್ತರ ಪದವಿ, ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆ: ಕರ್ನಾಟಕ ಸರ್ಕಾರದ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಧಿಕೃತ ಜಾಲತಾಣದ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಮೇ 30 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ksrlps.karnataka.gov.in ಭೇಟಿ ನೀಡಬಹುದಾಗಿದೆ.

prajaprabhat

Recent Posts

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

30 minutes ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

7 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

7 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

7 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

7 hours ago