KSRTC ಚಾಲನಾ ವೃತ್ತಿ ತರಬೇತಿ ದಿನಾಂಕ ಮತ್ತೆ ವಿಸ್ತರಣೆ….

ಬೆಂಗಳೂರು.19.ಮೇ 25:- ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವ್ಯಾಪ್ತಿಯಲ್ಲಿ ಚಾಲಕ ಕಂ ನಿರ್ವಾಹಕರ ನೇಮಕಾತಿ ನಡೆಸುತ್ತಿದೆ. ಇದರ ಭಾಗವಾಗಿ ಹಾಸನ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುತ್ತದೆ.

14-02-2020 ರಂದು ಹೊರಡಿಸಿದ್ದ ಉಲ್ಲೇಖಿತ ಜಾಹೀರಾತಿನನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸ್ವೀಕರಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಮುಂದುವರಿಸಲಾಗಿದ್ದು, ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು 16-12-2024 ರಿಂದ ನಡೆಸಿಕೊಂಡು ಬರಲಾಗುತ್ತಿದೆ.

ಸದರಿ ಚಾಲನಾ ವೃತ್ತಿ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ದಿನಾಂಕ 08-05-2025 ರಿಂದ 20-05-2025 ರವೆರೆಗೆ ಅವಕಾಶ ಕಲ್ಪಿಸಲಾಗಿತ್ತು. ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಗಿದೆ. ಚಾಲನಾ ವೃತ್ತಿ ಪರೀಕ್ಷೆಯನ್ನು ಮೇ 20ಕ್ಕೆ ಬದಲಾಗಿ ಮೇ 23 ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ 22-05-2025 ರ ಸಂಜೆ 5.00 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸಾರಿಗೆ ಇಲಾಖೆ ತಿಳಿಸಿದೆ.

ಇನ್ನೂ ಚಾಲನಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರೆಪತ್ರ ಡೌನ್-ಲೋಡ್ ಮಾಡಿಕೊಳ್ಳಬೇಕು. ಅದರೊಂದಿಗೆ ತಿಳಿಸಿರುವ ಅಗತ್ಯ ದಾಖಲಾತಿ ಸಮೇತರಾಗಿ ದಿನಾಂಕ ಮುಂದಿನ 23-05-2025 ರೊಳಗೆ ಹಾಜರಾಗುವಂತೆ ಇಲಾಕೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದೇ ಅಂತಿಮ ಚಾಲನಾ ಪರೀಕ್ಷೆಯಾಗಿದೆ. ಈ ಅಂತಿಮ ಅವಕಾಶವನ್ನು ತಪ್ಪಿಕೊಳ್ಳದಂತೆ ಕೋರಲಾಗಿದೆ. ಇದರ ಹೊರತು ತಡತವಾಗಿ ಬಂದವರಿಗೆ ಪರೀಕ್ಷೆಗೆ ಅನುಮತಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಮಿತಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

prajaprabhat

Recent Posts

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

1 hour ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

1 hour ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

1 hour ago

ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ: ವಸತಿ<br>ವ್ಯವಸ್ಥೆಗೆ ಸ್ಥಾನಿಕ ವೀಕ್ಷಕರ ನೇಮಕ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ‍್ಯಾಲಿಗೆ ಸ್ಥಾನಿಕ…

1 hour ago

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಶಿಕ್ಷೆ ಪ್ರಕಟ

ಕೊಪ್ಪಳ.07.ಆಗಸ್ಟ್ .25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮರೇಶ ಬಡಿಗೇರ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು…

1 hour ago

ಆ. 15 ರಂದು ಕೊಪ್ಪಳ ನಗರಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೊಪ್ಪಳ.07.ಆಗಸ್ಟ್.25: ಕೊಪ್ಪಳ ನಗರಸಭೆಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆ.…

1 hour ago