11/08/2025 3:33 AM

Translate Language

Home » ಲೈವ್ ನ್ಯೂಸ್ » KSRTC ಬಸ್, ಕಾರು ಡಿಕ್ಕಿ 2 ಮೃತೀವ್

KSRTC ಬಸ್, ಕಾರು ಡಿಕ್ಕಿ 2 ಮೃತೀವ್

Facebook
X
WhatsApp
Telegram

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಸೋಮಶೇಖರ್(55) ಹಾಗೂ ಪ್ರಕಾಶ್(28) ಮೃತ ದುರ್ದೈವಿಗಳಾಗಿದ್ದು ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.ಈ ಕುಟುಂಬ ಕಲಬುರಗಿಯ ರಾಣೇಶ್ ಪೀರ್ ದರ್ಗಾಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಕಾರು ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಇನ್ನು ಈ ಅಪಘಾತದಲ್ಲಿ ಇನ್ನೂ ಕೆಲವರಿಗೆ ಗಾಯಗಳಾಗಿದ್ದು, ಉಳಿದ ಗಾಯಾಳುಗಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದ್ದು, ಅಪಘಾತದ ತೀವ್ರತೆಗೆ ಕಾರು ಮತ್ತು ಬಸ್ ನಜ್ಜುಗುಜಾಗಿದೆ. ಈ ಅಪಘಾತದಿಂದ ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಆ ಬಳಿಕ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆ ಬದಿಗೆ ಸರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ರಸ್ತೆ ಅಪಘಾತಕ್ಕೆ ನವವಿವಾಹಿತೆ ಬಲಿ :

ವರಮಹಾಲಕ್ಷ್ಮೀ ಹಬ್ಬದ ದಿನದಂದೇ (ಆ.8) ನವವಿವಾಹತೆಯೊಬ್ಬರು ರಸ್ತೆ ಅಪಘಾತದಲ್ಲಿ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗೀತಾ (23) ಮೃತ ದುರ್ದೈವಿ. ಪತಿಯ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ನಡೆ ರಸ್ತೆ ಅವಘಡದಲ್ಲಿ ಗೀತಾ ಬಲಿಯಾಗಿದ್ದಾರೆ.ಎರಡು ತಿಂಗಳ ಹಿಂದಷ್ಟೇ ಸುನಿಲ್‌ ಎಂಬುವವರೊಡನೆ ಗೀತಾ ವಿವಾಹ ನಡೆದಿತ್ತು. ಶುಕ್ರವಾರ (ಆ.8) ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತನ್ನ ತಾಯಿಯ ಮನೆಗೆ ತೆರಳಿದ್ದರು. ಅವರನ್ನು ಕರೆತರಲು ಸುನಿಲ್‌ ಕೂಡಾ ಹೋಗಿದ್ದರು.

ಇಬ್ಬರೂ ಬೈಕ್‌ ನಲ್ಲಿ ಲಗ್ಗೆರೆ ಬ್ರಿಡ್ಜ್‌ ಬಳಿ ಬರುವಾಗ ಲಾರಿ ಡಿಕ್ಕಿಹೊಡೆದಿತ್ತು. ಗೀತಾ ಸ್ಥಳದಲ್ಲಿಯೇ ಮೃತಪಟ್ಟರೆ ಸುನಿಲ್‌ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಆದರೆ ಪತ್ನಿಯ ಶವವನ್ನು ತೊಡೆಯ ಮೇಲಿರಿಸಿಕೊಂಡು ಸುನಿಲ್‌ ರೋಧಿಸುತ್ತಿದ್ದ ದೃಶ್ಯ ನೋಡುಗರಿಗೆ ಕಣ್ಣೀರು ತರಿಸುವಂತಿತ್ತು.ರಾಜಗೋಪಾಲನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆದು ನ್ಯಾಯಾಂಗಬಂಧನಕ್ಕೆ ಒಪ್ಪಿಸಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD