Mobile Repair Training ಕೆನರಾ ಬ್ಯಾಂಕ್ ಗ್ರಾಮೀಣ ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಆಗಸ್ಟ್ 05, 2025 ರಿಂದ 30 ದಿನಗಳ ಕಾಲ ಪುರುಷರಿಗೆ ಉಚಿತ ಸೆಲ್ ಪೋನ್ ರಿಪೇರಿ ತರಬೇತಿ ನೀಡಲಿದೆ ನಿರುದ್ಯೋಗಿಗಳಿಗೆ ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ಸೆಲ್ ಪೋನ್ ರಿಪೇರಿ ತರಬೇತಿ ಶಿಬಿರ.!
ಗ್ರಾಮೀಣ ಭಾಗದ ಅಭ್ಯರ್ಥಿಯು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.
ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು.
ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ನೀಡಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್ 05, 2025 ರಂದು ಬೆಳಿಗ್ಗೆ 9.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9505894247, 8970476050, 9591514754, 9686248369, 8970446644 ಗಳಿಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.