NABL  ಮಾನ್ಯತೆ ಕುರಿತು ಜಾಗೃತಿ ಕಾರ್ಯಕ್ರಮ

ಬೀದರ.18.ಜೂನ್.25:-  NABL    ಜಾಗೃತಿ ಕಾರ್ಯಕ್ರಮವು ಜನರಲ್ಲಿ ಮಾನ್ಯತೆ ಸಂಬoಧಿತ ಲಾಭಗಳ ಬಗ್ಗೆ ತಿಳಿವು ನೀಡುವ ದಿಕ್ಕಿನಲ್ಲಿ ಒಳ್ಳೆಯ ಹೆಜ್ಜೆಯಾಗಿದೆ. ಇಂದಿನ ಕಾಲಘಟ್ಟದಲ್ಲಿ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಎಷ್ಟೊಂದು ಪ್ರಮುಖ ಎಂಬುದುರ ಕುರಿತು ಬೀದರ ತೋಟಗಾರಿಕೆ ಕಾಲೇಜಿನ ಡೀನ್ ಪ್ರೊ.ಡಾ.ಎಸ್.ವಿ.ಪಾಟೀಲ ತಿಳಿಸಿದರು.


ಅವರು ಸೋಮವಾರ  QCI–NABL     ಪ್ರಾದೇಶಿಕ ಕಚೇರಿ, ಬೆಂಗಳೂರು ಇವರು ಗುಣಮಟ್ಟದ ಕುರಿತು ಜಾಗೃತಿ ಮೂಡಿಸಲು ಹಾಗೂ ಎನ್‌ಎಬಿಎಲ್ ಮಾನ್ಯತೆ ಮತ್ತು ಅದರ ಲಾಭಗಳು, ಜೊತೆಗೆ ಕ್ಯೂಸಿಐ ಚಟುವಟಿಕೆಗಳ ಪರಿಚಯ ನೀಡಲು ಕರ್ನಾಟಕದ ತೋಟಗಾರಿಕೆ ಕಾಲೇಜು ಬೀದರ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಬೀದರ ಕೆಆರ್‌ಇ ಸೊಸೈಟಿಯ ಕರ್ನಾಟಕ ಆರ್ಟ್ಸ್ ಆ್ಯಂಡ್ ಕಾಮರ್ಸ ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಡಾ.ರಾಜಮೋಹನ ಪರದೇಶಿ ಮಾತನಾಡಿ, ಇದು ಜೈವಿಕ ತಂತ್ರಜ್ಞಾನ, ಕೃಷಿ, ಆಹಾರ, ಮಣ್ಣು ಪರೀಕ್ಷೆ ಮತ್ತು ಇತರ ಹಲವಾರು ಕ್ಷೇತ್ರಗಳಿಗೆ ಹೇಗೆ ಸಹಕಾರಿ ಎಂಬುದನ್ನು ವಿವರಿಸಿದರು.


ಸಂಪನ್ಮೂಲ ವ್ಯಕ್ತಿಗಳಾಗಿ ಎನ್‌ಎಬಿಎಲ್ ನಿರ್ದೇಶಕ ಶ್ರೀಕಾಂತ್ ಆರ್. ಮಾತನಾಡಿ, ಬೆಂಗಳೂರು ಪ್ರಾದೇಶಿಕ ಕಚೇರಿ ಐದು ದಕ್ಷಿಣ ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು ಎನ್‌ಎಬಿಎಲ್ ಮಾನ್ಯತೆ, ಕ್ಯೂಸಿಐ ಯ ಚಟುವಟಿಕೆಗಳು ಹಾಗೂ ಅದರ ಮಂಡಳಿಗಳು ಮತ್ತು ವಿಭಾಗಗಳ ಬಗ್ಗೆ ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾಹಿತಿಯನ್ನು ಒದಗಿಸುತ್ತಿರುವುದಾಗಿ ವಿವರಿಸಿದರು.


ಎನ್‌ಎಬಿಎಲ್ ಸಮನ್ವಯಕರಾದ ಅಕ್ಷಯ್ ಜಿ.ಎಂ. ಅವರು ಎನ್‌ಎಬಿಎಲ್ ಮಾನ್ಯತೆ ಪಡೆಯುವ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ವಿವರಿಸಿದರು.


ಎನ್‌ಎಬಿಎಲ್ ಸಮನ್ವಯಕರಾದ ಮಾನಸಿ ಕುಲಕರ್ಣಿ ಅವರು ಎನ್‌ಎಬಿಎಲ್‌ಯ recognition   schemes ಹಾಗೂ  QCI  ಯ ವಿವಿಧ ಉಪಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಈ ಗುಣವತ್ತ ಯಾತ್ರದಲ್ಲಿ ವಿವಿಧ ಪ್ರಯೋಗಾಲಯಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಕೈಗಾರಿಕಾ ಪ್ರತಿನಿಧಿಗಳಾದ 35 ಕ್ಕೂ ಹೆಚ್ಚು ಜನರು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.

prajaprabhat

Recent Posts

ಸಕ್ರಿಯ ರಾಜಕಾರಣಕ್ಕೆ ಬಂದು ನನ್ನ ವಿರುದ್ಧ ಆರೋಪ ಮಾಡಿ : ಡಾ.ಎಂ.ಸಿ.ಸುಧಾಕರ್ ಕಿಡಿ

ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…

25 minutes ago

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…

42 minutes ago

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

7 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

8 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

10 hours ago

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

10 hours ago