ಇತ್ತೀಚಿಗೆ ಪ್ರಕಟಗೊಂಡ NEET-2025 ರ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಮತ್ತು ಬೀದರ ಜಿಲ್ಲೆಗೆ ಗೌರವ ತಂದು ಕೊಟ್ಟಿದ್ದಾರೆ.
ಈ ಸಾಧನೆಗೆ ಜ್ಞಾನ ಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಡಾ. ಪೂರ್ಣಿಮಾ ಜಾರ್ಜ್, ಜ್ಞಾನ ಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ. ಮುನೇಶ್ವರ ಲಾಖ ಜ್ಞಾನ ಸುಧಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಚನ್ನವೀರ ಪಾಟೀಲ್, ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಸುಜಾತಾ ಬೊಮ್ಮರೆಡ್ಡಿ ಹಾಗೂ ಡಿ. ಶ್ರೀಕಾಂತ್ ರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಾ ಉದಯ ಪಾಟೀಲ್ All India Rank – 7245 (540/720) ಮತ್ತು ಶ್ರೀಕಾಂತ ಭಾಪೂರಾವ All India Rank – 674 (CAT) (521/720) ಪಡೆಯುವ ಮೂಲಕ ಉಚಿತ ವೈದ್ಯಕೀಯ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ. ಇವರ ಜೊತೆಗೆ ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳು ಉಚಿತ ವೈದ್ಯಕೀಯ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ.
ಈ ಸಾಧನೆಗೈದ ಎಲ್ಲ ವಿದ್ಯಾರ್ಥಿಗಳಿಗೆ ಜ್ಞಾನ ಸುಧಾ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷೆ ಡಾ. ಪೂರ್ಣಿಮಾ ಜಾರ್ಜ್ ರವರು ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಇದರ ಶ್ರೇಯ ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಸುಜಾತಾ ಬೊಮ್ಮರೆಡ್ಡಿ, ಡಿ. ಶ್ರೀಕಾಂತ್ ರೆಡ್ಡಿ ಹಾಗೂ ಅವರ ತಂಡದವರಿಗೆ ಸಲ್ಲುತ್ತದೆ ಎಂದರು.
ಈ ಸಂದರ್ಭದಲ್ಲಿ ಜ್ಞಾನ ಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ. ಮುನೇಶ್ವರ ಲಾಖ ರವರು ಮಾತನಾಡಿ ಸುಜಾತಾ ಬೊಮ್ಮರೆಡ್ಡಿ ಹಾಗೂ ಶ್ರೀಕಾಂತ್ ರೆಡ್ಡಿ ಅವರ ತಂಡ ಅತ್ಯುತ್ತಮ ಕೆಲಸ ಮಾಡುತ್ತಿದ್ದು, NEET 2025ರ ಪರೀಕ್ಷೆಯಲ್ಲಿ ಇಂತಹ ಒಳ್ಳೆಯ ಫಲಿತಾಂಶ ನೀಡಿ ಜಿಲ್ಲೆಗೆ ಮತ್ತು ಸಂಸ್ಥೆಗೆ ಅಪಾರ ಗೌರವ ತಂದುಕೊಟ್ಟಿದ್ದಾರೆ ಎಂದರು.
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…