ಬೆಂಗಳೂರು.29.ಮೇ.25:- ರಾಜ್ಯ ಸರ್ಕಾರದಿಂದ ಎನ್ ಹೆಚ್ ಎಂ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಎನ್ ಎಸ್ ಸಿಯು, ಐಸಿಯು ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕರು, ಪ್ರಮುಖ ಕ್ಲಿನಿಕಲ್ ತಜ್ಞರ ವೇತನ ಪರಿಷ್ಕರಿಸಿ ಆದೇಶಿಸಲಾಗಿದೆ.
ಈ ಮೂಲಕ ರಾಜ್ಯ ಸರ್ಕಾರವು ಎನ್ ಹೆಚ್ ಎಂ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಸಿಹಿಸುದ್ದಿ ನೀಡಿದೆ.
ಇಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯ / ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ MBBS ವೈದ್ಯಾಧಿಕಾರಿಗಳು, SNCU/ICU ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶೂಷಕರುಗಳಿಗೆ ಮತ್ತು ಪ್ರಮುಖ ಕ್ಲಿನಿಕಲ್ ತಜ್ಞರ (OBG, Paediatric, Anaesthesia, General Medicine, Ortho, Surgeon, Ophthalmologist) ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಪುಸ್ತಾವನೆಯನ್ನು ಸಲ್ಲಿಸಲಾಗಿದ್ದು, ಉಲ್ಲೇಖದನ್ವಯ 2024-26 ಅನುಮೋದನೆಗೊಂಡಿರುತ್ತದೆ. ವಿವರ ಈ ಕೆಳಕಂಡಂತಿದೆ ಎಂದು ತಿಳಿಸಿದೆ.
ಮೇಜರ್ ಕ್ಲಿನಿಕಲ್ ಸ್ಪೆಷಲಿಸ್ಟ್ ಹುದ್ದೆಯ ನೇಮಕಾತಿಗೆ ಮಾನದಂಡಗಳು:
1. ಮೇಜರ್ ಕ್ಲಿನಿಕಲ್ ಸ್ಪೆಷಲಿಸ್ಟ್ಗಳ ಆರಂಭಿಕ ಮಾಸಿಕ ವೇತನ ರೂ. 1,40,000.00
2. ಅನುಭವಿ ಅಭ್ಯರ್ಥಿಗಳ ಮಾಸಿಕ ವೇತನವನ್ನು ಅವರ ಅನುಭವದ ಆಧಾರದ ಮೇಲೆ ಪ್ರತಿ ವರ್ಷಕ್ಕೆ 2.5% ರಷ್ಟು ಹೆಚ್ಚುವರಿಯಾಗಿ ನಿಗದಿಪಡಿಸುವುದು(1,400,000+2.5%).
3. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ ಶಿಫಾರಸ್ಸುಗೊಂಡ ಅನುಭವಿ ಅಭ್ಯರ್ಥಿಗಳ ಪಟ್ಟಿಯನ್ನು ಮಾನ್ಯ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರಿಗೆ ರವಾನಿಸಿ, ಅವರ ಅನುಮೋದನೆ ಪಡೆದ ನಂತರ ಅಂತಿಮಗೊಳಿಸುವುದು.
4. ಮೇಜರ್ ಕ್ಲಿನಿಕಲ್ ಸ್ಪೆಷಲಿಸ್ಟ್ಗಳ ವೇತನವನ್ನು ರೂ. 2,00,000.00 ಗಳಿಗೆ ಮಿತಿಗೊಳಿಸುವುದು.
ಪ್ರಸ್ತಾಪಿತ ಪರಿಷ್ಕರಿಸಲ್ಪಟ್ಟ ವೇತನವು ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಲಿ ಪಡೆಯುತ್ತಿರುವ ವೇತನ ಶ್ರೇಣಿಯಲ್ಲಿಯೇ ಮಂದುವರಿಯುತ್ತಾರೆ. ಈ ನೌಕರರು ರಾಜೀನಾಮೆ ಸಲ್ಲಿಸಿ, ಹೊಸ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಹೊಸ ನೇಮಕಾತಿ ಮಾಡುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಅವರ ಅನುಭವದ ಆಧಾರದ ಮೇಲೆ ಆದ್ಯತೆ ನೀಡುವುದು ಎಂದಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…