OPS ಬಯಸುವ ನೌಕರ,ಪರಿಶೀಲನೆಗೆ ಮೂರು ತಂಡ ರಚನೆ. ರಾಜ್ಯ ಸರ್ಕಾರ

ಬೆಂಗಳೂರು.03.ಜೂನ್.25:- ಹಳೆ ಪಿಂಚಣಿ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರಕಾರ (Karnataka Government) ಸಿಹಿಸುದ್ದಿಯೊಂದನ್ನು ನೀಡಿದ್ದು, ಒಪಿಎಸ್ (OPS) ಪ್ರಸ್ತಾವನೆ ಪರಿಶೀಲಿಸಲು ರಾಜ್ಯ ಸರ್ಕಾರವು 3 ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ.

ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ತರಬೇಕು ಎಂಬುದು ಸರಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ಈ ಕುರಿತು ಹಲವು ಭರವಸೆಗಳನ್ನು ರಾಜ್ಯ ರಾಜಕೀಯ ನಾಯರು ನೀಡುತ್ತಲೇ ಬಂದಿದ್ದಾರೆ.

ದಿನಾಂಕ: 24.1.2024ರ ಆದೇಶದನ್ವಯ ಒಪಿಎಸ್ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ತಲಾ ಮೂವರು ಅಧಿಕಾರಿ/ನೌಕರರನ್ನೊಳಗೊಂಡಂತೆ ಮೂರು ತಂಡಗಳನ್ನು ರಚಿಸಿ ಕಾರ್ಯ ಹಂಚಿಕೆ ಮಾಡಿದೆ. ಸದರಿ ಅಧಿಕಾರಿ / ನೌಕರರು ಪ್ರತಿ ದಿನ ಅಪರಾಹ್ನ ಕಡ್ಡಾಯವಾಗಿ ಹಾಜರಾಗಿ ದಿನಾಂಕ: 24.1.2024ರ ಆದೇಶದನ್ವಯ ಒಪಿಎಸ್‌ಗೆ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ಸೂಚನೆ ಆದೇಶಿಸಿದೆ.

ಕೇಂದ್ರ ಸರ್ಕಾರಿ ನೌಕರರು ಮತ್ತು ಅನೇಕ ರಾಜ್ಯ ಸರ್ಕಾರಿ ನೌಕರರು ಇತ್ತೀಚಿನ ದಿನಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಲು ಹೋರಾಟ ನಡೆಸುತ್ತಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆ ಅಡಿಯಲ್ಲಿ ಹೊಸ ಪಿಂಚಣಿ ಯೋಜನೆಯು ಹಲವಾರು ಪ್ರಯೋಜನಗಳನ್ನು ಹೊಂದಿದ್ದರೂ, ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಪರಿಚಯಿಸಲು ಒತ್ತಾಯಿಸುತ್ತಿದ್ದಾರೆ.

ರಾಷ್ಟ್ರೀಯ ಪಿಂಚಣಿ ಯೋಜನೆ ಅಡಿಯಲ್ಲಿ ಹೊಸ ಪಿಂಚಣಿ ಯೋಜನೆಯು ಹಲವಾರು ಪ್ರಯೋಜನಗಳನ್ನು ಹೊಂದಿದ್ದರೂ, ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮತ್ತೆ ಜಾರಿಗೆ ತರಬೇಕು ಎನ್ನುವ ಒತ್ತಾಯ ಸರ್ಕಾರಿ ನೌಕರರಿಂದ ಕೇಳಿ ಬರುತ್ತಲೇ ಇದೆ. ಎರಡೂ ಯೋಜನೆಗಳು ಸರ್ಕಾರಿ ನೌಕರರಿಗೆ ಮಾಸಿಕ ಪಿಂಚಣಿ ನೀಡುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದೆ. ರಾಜಸ್ಥಾನ, ಹಿಮಾಚಲ ಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಿವೆ.

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗಿಂತ ಹಳೆಯ ಪಿಂಚಣಿ ಯೋಜನೆ ನಿಜವಾಗಿಯೂ ಉತ್ತಮವಾಗಿದೆ ಎನ್ನುವುದು ನೌಕರರ ವಾದ. ಈ ಕಾರಣದಿಂದಲೇ ಒಪಿಎಸ್ ಮರು ಜಾರಿಗೆ ಒತ್ತಾಯ ಕೇಳಿ ಬರುತ್ತಿದೆ. ಒಪಿಎಸ್ ಮರು ಜಾರಿಯಾದರೆ ಮಾಸಿಕ ಪಿಂಚಣಿ ರೂಪದಲ್ಲಿ ಜೀವನದುದ್ದಕ್ಕೂ ನಿರಂತರ ಆದಾಯವನ್ನು ಖಚಿತಪಡಿಸುತ್ತದೆ. ಇದಕ್ಕಾಗಿ ವೇತನದಿಂದ ಯಾವುದೇ ರೀತಿಯಲ್ಲಿಯೂ ಹಣವನ್ನು ಕಡಿತಗೊಳಿ ಸುವುದಿಲ್ಲ. ಇದರಿಂದಾಗಿ ಉದ್ಯೋಗಿಗಳ ಮೇಲಿನ ಹೊರೆ ಇರುವುದಿಲ್ಲ. OPS ಅಡಿಯಲ್ಲಿ ಪಿಂಚಣಿ ಆದಾಯದ ಮೇಲೆ ತೆರಿಗೆ ವಿಧಿಸಲಾಗುವುದಿಲ್ಲ.ನಿವೃತ್ತಿಯ ನಂತರ ಪಡೆದ ಆದಾಯಕ್ಕೆ ತೆರಿಗೆ ವಿನಾಯಿತಿ ಇದೆ.

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

2 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

2 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

3 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

11 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

12 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

12 hours ago