RCB ವಿಜಯೋತ್ಸವದ ಸಂಧರ್ಭದಲ್ಲಿ ಕಾಲ್ತುಳಿತಕ್ಕೆ 11 ಮಂಡಿ ಸಾವಿಗೆ ಕಾರಣಗಳು, ತನಿಖೆಗೆ.ಆದೇಶ

ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ಸಂಧರ್ಭದಲ್ಲಿ ಕಾಲ್ತುಳಿತಕ್ಕೆ 11 ಮಂಡಿ ಸಾವಿಗೆ ಕಾರಣಗಳು, ತನಿಖೆಗೆ ರಾಜ್ಯ ಸರ್ಕಾರ ಆದೇಶ.

ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ಸಂಧರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು, ಬೆಂಗಳೂರು ಇವರ ದಿನಾಂಕಂ4.06.2025ರ ವರದಿಯಲ್ಲಿ ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭವು ನಡೆಯುವ ಸಂದರ್ಭದಲ್ಲಿ ವಿಧಾನಸೌಧದ ಮುಂಭಾಗ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಸಂಖ್ಯೆಯಲ್ಲಿ ಏಕಾಏಕಿ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು.

ಈ ಕಾರ್ಯಕ್ರಮವು ಅಲ್ಪ ಕಾಲದಲ್ಲಿ ನಿರ್ಧರಿತವಾಗಿದ್ದರಿಂದ, ತಕ್ಷಣಕ್ಕೆ ಸಾಧ್ಯವಾದ ಎಲ್ಲ ಬಂದೋಬಸ್ತ್ ವ್ಯವಸ್ಥೆಗಳನ್ನು ಏರ್ಪಡಿಸಲಾಗಿತ್ತು. ಆದರೂ, ಏಕಾಏಕಿ ಸಾವಿರಾರು ಅಭಿಮಾನಿಗಳು ಸೇರಿದ್ದರಿಂದ ಮಧ್ಯಾಹ್ನ 3:30 ಗಂಟೆಯಿಂದ 4:30 ಗಂಟೆಯ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ನುಗ್ಗುವಾಗ ಬ್ಯಾರಿಕೇಡ್ ಮುರಿದು ಒಬ್ಬರ ಮೇಲೆ ಒಬ್ಬರು ಬಿದ್ದು ಉಂಟಾದ ನೂಕು ನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದ್ದು, ಈ ಘಟನೆಯಲ್ಲಿ ಹನ್ನೊಂದು ಮಂದಿ ಮೃತರಾಗಿದ್ದಾರೆ. 47 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುತ್ತಾರೆ ಎಂದು ತಿಳಿಸಿರುತ್ತಾರೆ.

ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು, ಬೆಂಗಳೂರು ರವರು ಸಲ್ಲಿಸಿರುವ ವರದಿಯನ್ನು ಸರ್ಕಾರದಲ್ಲಿ ಕೂಲಂಕುಷವಾಗಿ ಪರಿಶೀಲಿಸಿದ್ದು ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು.

ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಟೀರಿಯಲ್ ವಿಚಾರಣೆಯನ್ನು ನಡೆಸಲು ಸರ್ಕಾರವು ನಿರ್ಧರಿಸಿರುತ್ತದೆ. ಅದರಂತೆ ಈ ಕೆಳಕಂಡ ಆದೇಶ ಹೊರಡಿಸಿದೆ.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

8 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

13 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

17 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

23 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

24 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

24 hours ago