SC /ST ಅಭಿವೃದ್ಧಿಗೆ ಹಣ ರಾಜ್ಯ ಸರ್ಕಾರ ದುರ್ಬಳಿಕೆ ಖಂಡಿಸಿ ಮಾ.೪ ಬಿಜೆಪಿಯಿಂದ ಪ್ರತಿಭಟನೆ.!

ಬೀದರ.01.ಮಾರ್ಚ.25:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ರಾಜ್ಯ ಸರ್ಕಾರದಿಂದ ದುರ್ಬಳಿಕೆ ಖಂಡಿಸಿ ಮಾ.೪ ಬಿಜೆಪಿಯಿಂದ ಪ್ರತಿಭಟನೆ ೫ ಸಾವಿರ ಜನ ಭಾಗಿ – ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ರಾಜ್ಯ ದ ಮುಖ್ಯಮಂತ್ರಿಯಾದ ಸಿದ್ರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದಿಂದ  ಅಧಿಕಾರದ ಚುಕ್ಕಾಣಿ ಹಿಡಿದ ನಂತರ  ರಾಜ್ಯದ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಅವ್ಯವಯದಲ್ಲಿ  ಮೀಸಲಿಟ್ಟ ಹಣವನ್ನು ದುರ್ಬಳಿಕೆ ಮಾಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ ಮಾಡಲಾಗಿದೆ ಇದರ ವಿರುದ್ಧ ಜಿಲ್ಲಾ ಭಾರತೀಯ ಜನತಾ ಪಾರ್ಟಿಯಿಂದ ಮಾ.೪ ರಂದು  ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ  ಜಿಲ್ಲೆಯ  ೫ ಸಾವಿರ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆಂದು  ರಾಜ್ಯ ಬಾರತೀಯ ಜನತಾ ಪಾರ್ಟಿಯ ಕಾರ್ಯದರ್ಶಿ ಹಾಗೂ  ಬೀದರ ದಕ್ಷೀಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ  ಬೆಲ್ದಾಳೆಯವರು  ಇಂದು  ಪಕ್ಷದ ಜಿಲ್ಲಾ ಕಚೇರಿಯಲ್ಲಿ  ಪ್ರತಿಭಟನೆಯ ಪೂರ್ವ ಭಾವಿ ಸಿದ್ದತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ರಾಜ್ಯ  ಕಾಂಗ್ರೇಸ್ ಸರ್ಕಾರದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಯನ್ನು ಕಾಂಗ್ರೇಸ್ ಪಕ್ಷದ ಮಾತ್ರ ಸಾಧ್ಯ ಎಂದು ಚುನಾವಣೆಯ ಸಮಯದಲ್ಲಿ ಜನರಿಗೆ  ಹೇಳಿ ಅಧಿಕಾರದ ಚುಕ್ಕಾಣಿ ಹಿಡಿಯಿತು ಆದರೆ  ಅಹಿಂದ ನಾಯಕರು ಎಂದು ಅನುಕೊಳ್ಳುತ್ತಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಸದರಿ ಸಮಾಜದ  ಅಭಿವೃದ್ಧಿಗಾಗಿ ಮೀಸಲಟ್ಟ ಹಣವನ್ನು  ರಾಜ್ಯ ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಉಪಯೋಗಿಸಿ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಾಂಗಕ್ಕೆ ಅನ್ಯಾಯ ಮಾಡಿದ್ದಾರೆ.


ಇದನ್ನು ಖಂಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿಪಕ್ಷದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ  ಇದರಂತೆ ಬೀದರನಲ್ಲಿಯೂ ಕೂಡಾ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ  ಈ ಪ್ರತಿಭಟನೆಯಲ್ಲಿ ಸಾಂಸದರು ಹಾಗೂ ರಾಜ್ಯದ ಮಾಜಿ  ಉಪ ಮುಖ್ಯಮಂತ್ರಿಗಳಾದ ಗೋವಿಂದ್ ಕಾರಜೋಳ, ಶಾಸಕರಾದ ಸಿಮೆಂಟ್ ಮಂಜು, ಕೃಷ್ಣ ನಾಯಕ ಹಡಗಲಿ,  ರಾಜ್ಯ ಮುಖ್ಯ ವಕ್ತರರಾದ ಅಶ್ವತ್ ನಾರಾಯಣ,  ಮಾಜಿ ಶಾಸಕರುಗಳಾದ  ಎಸ್.ಡಿ. ರಾಮಚಂದ್ರ, ಸೋಮಲಿಂಗಪ್ಪ್, ರಾಷ್ಟ್ರೀಯ ಎಸ್ಸಿ ಮೋರ್ಚಾದ ಕಾರ್ಯದರ್ಶಿಗಳಾದ ಜೈಕುಮಾರ ಕಾಂಗೆ, ಪ್ರಮುಖರಾದ ಫರ್ನಾಂಡಿಸ್ ಹಿಪ್ಪಳಗಾಂವ, ಕು.ಲಲಿತಾ ಅನಾಪುರ ಹಾಗೂ ಅಂಬರಾಯ  ಅಷ್ಟಗಿ ಸೇರಿದಂತೆ  ಜಿಲ್ಲೆಯ ಎಲ್ಲಾ ಬಿಜೆಪಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು , ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಗಳು ಪಾಲ್ಗೊಳ್ಳಲಿದ್ದಾರೆ ಈ  ಇದೇ ಸಂದರ್ಭದಲ್ಲಿ  ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ರಾದ ಸೋಮನಾಥ ಪಾಟೀಲ ಅವರು  ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪಕ್ಷದ  ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಳ್ಳಬೇಕೆoದರು.

ಈ ಪೂರ್ವಭಾವಿ ಸಬೆಯಲ್ಲಿ  ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಔರಾದೆ, ಕಿರಣ ಪಾಟೀಲ  ಜಿಲ್ಲಾ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ರವಿ ನಿಜಾಂಪೂರೆ,  ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಗುಂಡಪ್ಪ  ಬುಧೆರಾ,  ಜಿಲ್ಲಾ ವಕ್ತಾರರಾದ  ಸುಧೀರ ಕಾಡೋದೆ, ಮಾಧ್ಯಮ ಪ್ರಮುಖರಾದ ಶ್ರೀನಿವಾಸ ಚೌದರಿ, ಸಹ ಪ್ರಮುಖರಾದ ಸಂಗಮೇಶ ನಾಸಿಗಾರ , ಬೀದರ ನಗರ ಗಟಕದ ಅಧ್ಯಕ್ಷರಾದ ಶಶಿ ಹೊಸಳ್ಳಿ, ಬೀದರ ಗ್ರಾಮಾಂತರ ಘಟಕದ ಅಧ್ಯಕ್ಷರಾದ  ದೀಪಕ ಗಾದಗೆ ,ರಾಜಶೇಖರ ನಾಗಮೂರ್ತಿ ಸೇರಿದಂತೆ ಪಕ್ಷದ  ಇತರ ನಾಯಕರು ಉಪಸ್ಥಿತರಿದ್ದರು.

prajaprabhat

Recent Posts

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

55 minutes ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

1 hour ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

3 hours ago

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

3 hours ago

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

8 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

9 hours ago