ಬೀದರ.17.ಏಪ್ರಿಲ್.25:- ಕಳೆದ ಬಿಜೆಪಿ ಸರ್ಕಾರದಲ್ಲಿ 2019-20ನೇ ಸಾಲಿನ ನಂತರದ ಎಲ್ಲ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು, ಅದನ್ನು ವಿರೋಧಿಸಿ ದಲಿತ ವಿದ್ಯಾರ್ಥಿ ಪರಿಷತ್ ನಿರಂತರ ಹೋರಾಟ ಮಾಡುತ್ತಾ ಬಂದಿದೆ, ಈ ಕುರಿತು ಕಾಂಗ್ರೇಸ್ ಸರ್ಕಾರ ವಿರೋಧ ಪಕ್ಷದಲ್ಲಿದಾಗ ಮಾನ್ಯ ತಮಗೆ ಸೇರಿದಂತೆ ಹಲವು ನಾಯಕರಿಗೆ ಮನವಿ ಪತ್ರ ನೀಡಿ ಗಮನ ಸೆಳೆದಿದ್ದು, ಈ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನಿಲ್ಲಿಸಿದ್ದಗಿನಿಂದ ವಸತಿ ಶಾಲೆಗಳ ಪ್ರವೇಶವು ನಿರ್ಬಂಧವಾಗಿದೆ, ಇದರಿಂದ ವಿಧ್ಯಾಭ್ಯಾಸ ಮುಂದುವರೆಸಲು ವಿದ್ಯಾರ್ಥಿಗಳಿಗೆ ತುಂಬಾ ಹಿನ್ನಡೆಯಾಗುತ್ತದ್ದು ಹಲವು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ, ಗ್ರಾಮೀಣ ಭಾಗದ ಎಲ್ಲ ವಿದ್ಯಾರ್ಥಿಗಳು ನಮ್ಮ ವಸತಿ ನಿಲಯಗಳನ್ನು ಅವಲಂಬಿಸಿದ್ದಾರೆ, ವಿಶೇಷವಾಗಿ ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಸರ್ಕಾರಿ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿದ್ದು, ಅದರಿಂದ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವುದು ಅನಿವಾರ್ಯವಾಗಿದೆ.
ಹಾಗಾಗಿ ಇದನ್ನು ತಾವುಗಳು ಗಂಭೀರವಾಗಿ ಪರಿಗಣಿಸಿ ತಾವುಗಳು ಸದ ಶೋಷಿತ ಸಮುದಾಯದ ಬಗ್ಗೆ ಚಿಂತಿಸುವ ನಿಮ್ಮ ಗಮನವನ್ನು ಸೆಳೆಯುತ್ತಿದ್ದು, ತಾವುಗಳು ಗಂಭೀರವಾಗಿ ಪರಿಗಣಿಸಿ ಹಾಗು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಗಮನ ಸೆಳೆದು ಆದಷ್ಟು ಬೇಗ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಲು ಒತ್ತಾಯಿಸಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ವತಿಯಿಂದ ಒತ್ತಾಯಿಸಲಾಯಿತು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…