05/07/2025 3:38 PM

Translate Language

Home » ಲೈವ್ ನ್ಯೂಸ್ » SSLC ಪರೀಕ್ಷೆ’-3 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ,!

SSLC ಪರೀಕ್ಷೆ’-3 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ,!

Facebook
X
WhatsApp
Telegram

ಬೆಂಗಳೂರು.05.ಜುಲೈ.25:- ರಾಜ್ಯಾಧ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ KSRTC ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ:05.07.2025 ರಿಂದ ಕರ್ನಾಟಕದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ-3 ಪ್ರಾರಂಭವಾಗಲಿವೆ.

ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿರುವ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರು, ಕರಾರಸಾ ನಿಗಮ ಬೆಂಗಳೂರು ರವರ ಉಲ್ಲೇಖದನ್ವಯ ತಿಳಿಸಿರುತ್ತಾರೆ.

ಅದರನ್ವಯ ಕ.ಕ.ರ.ಸಾ ನಿಗಮವು, ಎಸ್.ಎಸ್.ಎಲ್.ಸಿ ಪರೀಕ್ಷೆ-3 ನಡೆಯುವ ದಿನಾಂಕಗಳಂದು 05.07.2025 50 12.07.2025 ಪರೀಕ್ಷೆಗೆ ಹಾಜರಾಗುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ಅದರಂತೆ ಕ್ರಮವಹಿಸಲು ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ತಿಳುವಳಿಕೆ ನೀಡಲು ಸೂಚಿಸಲಾಗಿದೆ.

ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು.ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ಕೋರಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!