SSLC, PUC, ಎಸ್ ಎಸ್ ಎಲ್ ಸಿ ಪಿಯುಸಿ ನಕಲಿ ಅಂಕಪಟ್ಟಿ ಜಾಲ ಪತ್ತೆ.

ಬೆಂಗಳೂರು.25.ಮಾರ್ಚ್.25:- ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಹಾಗೂ ಪಿಯುಸಿ ನಕಲಿ ಅಂಕಪಟ್ಟಿ ಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ.

ರಾಜ್ಯದಲ್ಲಿ ಮೂವರು ಆರೋಪಿಗಳು ಬೆಂಗಳೂರು ಧಾರವಾಡ ಬೆಳಗಾವಿ ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ನಕಲಿ ಅಂಕಪಟ್ಟಿ ತಯಾರಿ ಕಾರ್ಯ ಮಾಡುತಿದ್ದರು ಬಂಧಿತ ಆರೋಪಿಗಳು ಸ್ಟಡಿ ಸೆಂಟರ್ ಗಳನ್ನು ತೆರೆದು 5 10 ಸಾವಿರ ರೂಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ನಕಲಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು.

ಸ್ಟೆಡಿ ಸೆಂಟರ್ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು. ಆರೋಪಿಗಳು ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ.

ಆರೋಪಿಗಳು ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ.

prajaprabhat

Recent Posts

ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ PH.D ಪ್ರಮಾಣಪತ್ರ

ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…

2 hours ago

ವಿಶೇಷಚೇತನ ಅತಿಥಿ ಉಪನ್ಯಾಸಕರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಳ ಸರ್ಕಾರ ಗಮನ ಸೆಳೆಲೀ..

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…

2 hours ago

Free ಉಚಿತ ‘ಮೊಬೈಲ್ ರಿಪೇರಿ’ ತರಬೇತಿಗಾಗಿ ಅರ್ಜಿ ಆಹ್ವಾನ

ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌…

4 hours ago

ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ  ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು  ಪರಿಶಿಷ್ಟ ಪಂಗಡಕ್ಕೆ…

6 hours ago

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…

6 hours ago

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

8 hours ago