UPSC 493 ವಿವಿಧ ಇಲಾಖೆಗಳಲ್ಲಿ ಖಾಲಿ ಹುಡ್ಡೆಗಳು ಭರ್ತಿಗೆ ಅಧಿಸೂಚನೆ

ಕೇಂದ್ರ ಲೋಕ ಸೇವಾ ಆಯೋಗ

ಹೊಸ ದೆಹಲಿ.11.ಜೂನ.25:- ಇದು ಭಾರತದ ಒಂದು ಕೇಂದ್ರೀಯ ಸಂಸ್ಥೆಯಾಗಿದ್ದು ಸಾರ್ವಜನಿಕ ಸೇವೆಗೆ ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆಗಳನ್ನು ನಡೆಸಿ ಲೋಕ ಸೇವಾ ಅಧಿಕಾರಿಗಳನ್ನು ಆಯ್ಕೆ ಮಾಡುವ ಕಾರ್ಯದಲ್ಲಿ ತೊಡಗುವ ಅಧಿಕಾರವನ್ನು ಹೊಂದಿದೆ.

(UPSC) 2025ರಲ್ಲಿ ವಿವಿಧ ಕೇಂದ್ರ ಸರ್ಕಾರಿ  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 493 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಎಲ್ಲಾ  ಹುದ್ದೆಗಳಿಗೆ ಲಿಖಿತ ಪರೀಕ್ಷೆ ಇಲ್ಲದೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 12, 2025ರ ಒಳಗೆ Online Application ಸಲ್ಲಿಸಬೇಕು.

ಹುದ್ದೆಗಳ ವಿವರ:

ಯುಪಿಎಸ್ಸಿ ಈ ಅಧಿಸೂಚನೆಯಡಿ ಕಾನೂನು ಅಧಿಕಾರಿ, ಕಾರ್ಯಾಚರಣೆ ಅಧಿಕಾರಿ, ವಿಜ್ಞಾನಿ, ಸ್ಪೆಷಲಿಸ್ಟ್ ಗ್ರೇಡ್-3, ತರಬೇತಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಒಟ್ಟು 493 ಹುದ್ದೆಗಳಿಗೆ ಆಯ್ಕೆ ಸಂದರ್ಶನ, ಶೈಕ್ಷಣಿಕ ಅರ್ಹತೆ, ಮತ್ತು ಅನುಭವದ ಆಧಾರದ ಮೇಲೆ ನಡೆಯಲಿದೆ.

ಅರ್ಹತೆ ಮತ್ತು ಅರ್ಜಿ ಪ್ರಕ್ರಿಯೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಬಿಟೆಕ್, ಎಲ್‌ಎಲ್‌ಬಿ, ಅಥವಾ ಇತರ ಅಗತ್ಯ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಕೆಲವು ಹುದ್ದೆಗಳಿಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಕಡ್ಡಾಯವಾಗಿದೆ. ಅಭ್ಯರ್ಥಿಗಳ ವಯಸ್ಸು 30 ರಿಂದ 50 ವರ್ಷಗಳ ನಡುವೆ ಇರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.25 ಅರ್ಜಿ ಶುಲ್ಕವಿದ್ದು, ಇತರ ವರ್ಗಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ http://www.upsc.gov.in ವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕು.

ಕೊನೆಯ ದಿನಾಂಕ: ಜೂನ್ 12, 2025.

ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳ ಆಯ್ಕೆಯು ಸಂದರ್ಶನ, ಶೈಕ್ಷಣಿಕ ಅರ್ಹತೆ, ಮತ್ತು ಕೆಲಸದ ಅನುಭವದ ಆಧಾರದ ಮೇಲೆ ನಡೆಯಲಿದೆ. ಈ ಸುವರ್ಣಾವಕಾಶವನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ಉದ್ಯೋಗವನ್ನು ಪಡೆಯಲು ಈಗಲೇ ಅರ್ಜಿ ಸಲ್ಲಿಸಿ.

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago