ಬೀದರ.10.ಫೆ.25:- ರಾಜ್ಯದ ಗಡಿ ಜಿಲ್ಲೆ ಬೀದರ ವತಿಯಿಂದ ಬಿಜೆಪಿಯ ಮುಖಂಡರ ನಿಯೋಗ ತುಮಕೂರು ಸಂಸದ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ನೇತೃತ್ವದಲ್ಲಿ ನಿಯೋಗ ಸಚಿವರನ್ನು ಭೇಟಿ ಮಾಡಿತ್ತು.
Vande Bharat Express: ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ
ನಿಯೋಗ ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಬೇಕು.
ಬೀದರ್-ಬೆಂಗಳೂರು ವಯಾ ಕಲಬುರಗಿ ಹೊಸ ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ ಮಾಡಿದೆ. ಸೋಲ್ಹಾಪುರ-ಯಶವಂತಪುರ ಎಕ್ಸ್‌ಪ್ರೆಸ್ ರೈಲನ್ನು ಬೀದರ್-ಯಶವಂತಪುರವಾಗಿ ಬದಲಾವಣೆ ಮಾಡಬೇಕು. ಬೀದರ್-ಬೆಳಗಾವಿ ವಯಾ ಕಲಬುರಗಿ, ಗುರುಮಿಠಕಲ್, ಬಳ್ಳಾರಿ ಮತ್ತು ಹುಬ್ಬಳ್ಳಿ ರೈಲು ಪ್ರಾರಂಭಿಸಬೇಕು ಎಂದು ಒತ್ತಾಯಿಸಲಾಗಿದೆ.
Vande Bharat Express: ವಂದೇ ಭಾರತ್ ಪ್ರಯಾಣಿಕರಿಗೆ ಗುಡ್ ನ್ಯೂಸ್
ಶೀಘ್ರವೇ ಸಮೀಕ್ಷೆ ಮುಗಿಸಬೇಕು: ಬಿಜೆಪಿ ನಾಯಕರ ನಿಯೋಗ ಬೀದರ್-ನಾಂದೇಡ ವಯಾ ಔರಾದ್ ರೈಲು ಮಾರ್ಗದ ಸಮೀಕ್ಷೆ ಕಾರ್ಯಕ್ಕೆ ಅನುಮೋದನೆ ಸಿಕ್ಕಿದೆ. ಈ ಕಾರ್ಯವನ್ನು ಶೀಘ್ರದಲ್ಲಿ ಮುಗಿಸಿ ವರದಿ ಸಲ್ಲಿಸಬೇಕು ಎಂದು ಸಚಿವ ವಿ. ಸೋಮಣ್ಣಗೆ ಮನವಿ ಮಾಡಿದೆ.
Namo Bharat Train: ಕರ್ನಾಟಕಕ್ಕೆ 2 ನಮೋ ಭಾರತ್ ರೈಲು, ಮಾರ್ಗಗಳು
2024ರ ಡಿಸೆಂಬರ್‌ನಲ್ಲಿ ಬೀದರ್ ಸಂಸದ ಸಾಗರ್ ಖಂಡ್ರೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ಮಾಡಿದ್ದರು. ಕ್ಷೇತ್ರದ ರೈಲ್ವೆ ಯೋಜನೆ ಕುರಿತು ಅವರು ಸಚಿವರಿಗೆ ಹಲವು ಮನವಿಗಳನ್ನು ಸಲ್ಲಿಕೆ ಮಾಡಿದ್ದರು. ಆಗ ಬೀದರ್- ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ ಸಲ್ಲಿಸಿದ್ದರು.
ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಿದರೆ ಉಭಯ ನಗರಗಳ ನಡುವಿನ ಪ್ರಯಾಣದ ಅವಧಿ ಕಡಿಮೆಯಾಗಲಿದೆ. ಅಲ್ಲದೇ ಹಲವು ಉದ್ಯಮಿಗಳು ಬೀದರ್‌ನಿಂದ ಹೈದರಾಬಾದ್‌ಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರು ತಲುಪುತ್ತಾರೆ. ರೈಲು ಸೇವೆ ಆರಂಭವಾದರೆ ಅವರು ನೇರವಾಗಿ ಬೆಂಗಳೂರು ತಲುಪಬಹುದು ಎಂದು ಸಂಸದರು ಸಚಿವರ ಜೊತೆ ಚರ್ಚಿಸಿದ್ದರು.
ಫೆಬ್ರವರಿ 10: ಹೊಸ ಹೊಸ ಮಾರ್ಗದಲ್ಲಿ ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಿಸಬೇಕು ಎಂದು ಬೇಡಿಕೆ ಇದೆ. ಸದ್ಯ ಕರ್ನಾಟಕದಲ್ಲಿ 7ಕ್ಕೂ ಅಧಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸಂಚಾರ ನಡೆಸುತ್ತಿವೆ. ರಾಜಧಾನಿ ಬೆಂಗಳೂರು ಮತ್ತು ಕಲ್ಯಾಣ ಕರ್ನಾಟಕ ಸಂಪರ್ಕಿಸಲು ವಂದೇ ಭಾರತ್ ರೈಲು ಓಡಿಸಬೇಕು ಎಂದು ಬೇಡಿಕೆ ಸಲ್ಲಿಸಲಾಗಿದೆ.
ಸದ್ಯ ಭಾರತೀಯ ರೈಲ್ವೆ ಕರ್ನಾಟಕಕ್ಕೆ ಯಾವುದೇ ಹೊಸ ವಂದೇ ಭಾರತ್ ರೈಲುಗಳನ್ನು ಘೋಷಣೆ ಮಾಡಿಲ್ಲ. ಬೆಂಗಳೂರು-ಶಿವಮೊಗ್ಗ, ಬೆಂಗಳೂರು-ಬಳ್ಳಾರಿ, ಬೆಂಗಳೂರು-ಬೀದರ್, ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲುಗಳ ಸಂಚಾರ ನಡೆಸಬೇಕು ಎಂದು ಬೇಡಿಕೆ ಇದೆ.
ಪ್ರಸ್ತುತ ಸಂಚಾರ ನಡೆಸುತ್ತಿರುವ ಕೆಎಸ್‌ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಇದೆ. ಈ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿ, ಪ್ರಾಯೋಗಿಕ ಸಂಚಾರವೂ ಮುಕ್ತಾಯಗೊಂಡಿದೆ. ಆದರೆ ರೈಲು ಸೇವೆ ಇನ್ನೂ ಸಹ ಆರಂಭವಾಗಿಲ್ಲ.
ಬೆಂಗಳೂರು ಯಶವಂತಪುರ ಮತ್ತು ನಾಂದೇಡ್ ಬೆಂಗಳೂರು ಸಿಟಿ ರೈಲಗಳು ಬೀದರ್ ನಗರದಿಂದ ಬೆಂಗಳೂರು ಸೌಲಭ್ಯ ಇದೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…